Thursday, December 1, 2022
spot_img
Homeಸುದ್ದಿಮೋರ್ಬಿ ಸೇತುವೆ ದುರಂತದಲ್ಲಿ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು

ಮೋರ್ಬಿ ಸೇತುವೆ ದುರಂತದಲ್ಲಿ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು


ಅಹಮದಾಬಾದ್​: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು ಸಾವನ್ನಪ್ಪಿರುವ 141ಮಂದಿಯಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಜನರು ಸೇರಿದ್ದಾರೆ. ಈ ದುರಂತದ ತನಿಖೆಗಾಗಿ 5 ಸದಸ್ಯರ ವಿಶೇಷ ಸಮಿತಿಯನ್ನು ಗುಜರಾತ್ ಸರ್ಕಾರ ರಚಿಸಿದೆ.
ಮೋರ್ಬಿ ಸೇತುವೆ ಕುಸಿತ ದುರ್ಘಟನೆಯಲ್ಲಿ ನಾನು ಕುಟುಂಬದ ಐವರು ಮಕ್ಕಳ ಸಹಿತ 12 ಮಂದಿಯನ್ನು ಕಳೆದುಕೊಂಡಿದ್ದೇನೆ. ನನ್ನ ತಂಗಿಯ ಕುಟುಂಬದ ಸದಸ್ಯರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಹೇಳಿದ್ದಾರೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಈ ದುರ್ಘಟನೆಯಲ್ಲಿ ಬದುಕುಳಿದ ಎಲ್ಲರನ್ನು ರಕ್ಷಿಸಲಾಗಿದೆ. ನದಿಯಲ್ಲಿದ್ದವರ ಮೃತದೇಹಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ.
ಭಾನುವಾರ ಸಂಜೆ 6.30ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಈ ವೇಳೆ ಸೇತುವೆ ಮೇಲೆ ಮಕ್ಕಳು, ವೃದ್ಧರೂ ಸೇರಿದಂತೆ 400ಕ್ಕೂ ಹೆಚ್ಚು ಜನರು ಇದ್ದರು. ಸೇತುವೆ ಕುಸಿತದಿಂದಾಗಿ ಹಲವರು ನದಿಗೆ ಬಿದ್ದಿದ್ದಾರೆ. 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!