ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ : ಕಾರ್ಕಳ ಬಿಜೆಪಿ ತೀವ್ರ ಸಂತಸ

ಕಾರ್ಕಳ: ಕಾರ್ಕಳದ  44 ವರ್ಷದಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಶ್ರೀ ಶಾರದಾ ಪೂಜಾ ಸಮಿತಿ ಹಾಗೂ ಸಮಾಜ ಸೇವೆಯಲ್ಲಿ 50 ವರುಷ ಸೇವೆ ಸಲ್ಲಿಸಿದ್ದ ಕಾರ್ಕಳದ ಟಿ. ರಾಮಚಂದ್ರ ನಾಯಕ್ ಇವರನ್ನು ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಕಾರ್ಕಳ ಭಾರತೀಯ ಜನತಾ ಪಾರ್ಟಿ ತೀವ್ರ ಸಂತಸ ವ್ಯಕ್ತಪಡಿಸಿದೆ 
ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕೋಶವನ್ನು ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಿದ ಈಡಿಗ ಬಿಲ್ಲವ ನಾಮಧಾರಿಗಳು ಸೇರಿದಂತೆ 26 ಪಂಗಡಗಳನ್ನು ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ಮಾಡಲು ಈ ಸಮಾಜದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಸವರಾಜ್ ಅವರು ಆದೇಶ ಮಾಡಿರುವುದು ಶ್ಲಾಘನೀಯ. ಈ ಎಲ್ಲ ವಿಚಾರಗಳಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡಿ ಎಲೆಮರೆಯ ಕಾಯಿಯಂತಿರುವ ಕಾರ್ಕಳದವರನ್ನೇ ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ಕಾರ್ಯವೈಖರಿಗೆ ಅಭಿನಂದಿಸುತ್ತೇವೆ ಎಂದು ಕಾರ್ಕಳ ಬಿಜೆಪಿ ವಕ್ತಾರ ಕೆ.ಎಸ್. ಹರೀಶ್ ಶೆಣೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Articles

error: Content is protected !!