Thursday, December 1, 2022
spot_img
Homeಸುದ್ದಿನಂದಿನಿ ಹಾಲಿನ ಬೆಲೆ 3 ರೂ. ಏರಿಸಲು ನಿರ್ಧಾರ

ನಂದಿನಿ ಹಾಲಿನ ಬೆಲೆ 3 ರೂ. ಏರಿಸಲು ನಿರ್ಧಾರ

ಹೆಚ್ಚಿಸಿದ ಹಣ ಹೈನುಗಾರರಿಗೆ ವರ್ಗಾವಣೆ ಎಂದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್‌ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್‌ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!