ಸರ್ಧಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ : “ಏಕತೆಗಾಗಿ ಓಟ” ಸಮಾರೋಪ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.31 ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ “ಏಕತೆಗಾಗಿ ಓಟ” ಜರುಗಿತು. ಸಮಾರೋಪ ಸಮಾರಂಭದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಓಟದಲ್ಲಿ ಪಾಲಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜ್, ಪ್ರಧಾನ ಕಾರ್ಯದರ್ಶಿ ದಿನೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ದೈಹಿಕ ಶಿಕ್ಷಣ ನಿರ್ದೇಶಕ ರಾಮಚಂದ್ರ ಪಾಟ್ಕರ್ ಉಪಸ್ಥಿತರಿದ್ದರು.

Latest Articles

error: Content is protected !!