ಪುಲ್ವಾಮ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್‌ : ಇಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷ ಜೈಲು

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿ ಜೈಲು ಪಾಲಾದ ಬೆಂಗಳೂರಿನ ವಿದ್ಯಾರ್ಥಿ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14, 2019ರಂದು ಯೋಧರ ಮೇಲೆ ನಡೆದ ಉಗ್ರರ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಂತ್ತು 10,000 ರೂ. ದಂಡ ವಿಧಿಸಿದೆ.
ಎಚ್‌ಆರ್‌ಬಿಆರ್‌ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ. ಭಯೋತ್ಪಾದಕ ದಾಳಿಯ ಬಗ್ಗೆ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲು ರಶೀದ್ ಫೇಸ್‌ಬುಕ್ ಖಾತೆಯನ್ನು ರಚಿಸಿದ್ದ. ಸಿಸಿಬಿ ಪೊಲೀಸರು ರಶೀದ್‌ನನ್ನು ಆತನ ಮನೆ ಸಮೀಪದಿಂದ ಬಂಧಿಸಿದ್ದರು.
ಈತನ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ರಶೀದ್ ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಮೂರನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಾನೆ. ಫೆಬ್ರವರಿ 17, 2019 ರಂದು ಬಂಧನಕ್ಕೊಳಗಾದ ನಂತರ, ರಶೀದ್ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಫೇಸ್‌ಬುಕ್‌ನಲ್ಲಿದ್ದ ಅವನ ಪೋಸ್ಟ್‌ಗಳನ್ನು ಬೆಂಗಳೂರು ನಗರ ಪೊಲೀಸರ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ದ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಬಂಧನದ ಭೀತಿಯಿಂದ ರಶೀದ್ ಫೇಸ್‌ಬುಕ್ ಖಾತೆಯನ್ನು ಅಳಿಸಿ ಹಾಕಿದ್ದ.error: Content is protected !!
Scroll to Top