ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗುಪ್ಪೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಿಯ್ಯಾರು ಗ್ರಾ. ಪಂ. ಅಧ್ಯಕ್ಷ ಗಿರೀಶ್ ಅಮೀನ್ ತಾಯಿ ಭುವನೇಶ್ವರಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಗೈಯ್ಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿಜಯಶೆಟ್ಟಿ, ಉಪಾಧ್ಯಕ್ಷೆ ದೀಪ್ತಿ ದಿನೇಶ ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ದಾನಿಗಳಾದ ವಿಲ್ಫ್ರೆಡ್ ಕ್ಯಾಸ್ತಲಿನೋ ಉಪಸ್ಥಿತರಿದ್ದರು. ಶಾಲಾ ಕೊಠಡಿಗೆ ಟೈಲ್ಸ್ ವ್ಯವಸ್ಥೆಯನ್ನು ಒದಗಿಸಿದ ವಿಲ್ಫ್ರೆಡ್ ಕ್ಯಾಸ್ತಲಿನೊ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕನ್ನಡ ಕವಿಗಳಿಂದ ರಚಿತವಾದ ಹಾಡುಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ಮತ್ತು ಮಕ್ಕಳು ಭಾಗವಹಿಸಿದರು. ಶಾಲಾ ಮುಖ್ಯೋಪಾಧ್ಯಾ ಮನೋಹರ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಗ್ರೇಸ್.ಎಚ್. ವಜ್ರಾವತಿ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಗೀತಾ ನಾಯಕ್ ವಂದಿಸಿದರು.