Thursday, December 1, 2022
spot_img
Homeಸುದ್ದಿಇಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಇಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ


ಬೆಂಗಳೂರು: ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನ ಪ್ರಶವನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು ಪ್ರದಾನ ಮಾಡಲಾಗುವುದು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ತಮಿಳು ನಟ ರಜನಿಕಾಂತ್ ಮತ್ತು ತೆಲುಗಿನ ಜ್ಯೂನಿಯ್ ಎನ್‌ಟಿಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆ
ಇನ್ಫೋಸಿಸ್ ಫೌಂಡೇಷನ್’ನ ಮುಖ್ಯಸ್ಥರಾದ ಸುಧಾಮೂರ್ತಿಯವರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೆ, ನಟ ಡಾ.ರಾಜ್‌ಕುಮಾರ್ ಅವರ ಕುಟುಂಬದ 50 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!