ಅಹಮದಾಬಾದ್: ಗುಜರಾತ್‌ನ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇತುವೆಯನ್ನು ನವೀಕರಿಸಿದ ಕಂಪನಿ, ಟಿಕೆಟ್ ಮಾರಾಟಗಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ.
ಭಾನುವಾರ 143 ವರ್ಷ ಹಳೆಯ ಮಚ್ಚು ನದಿಯ ತೂಗು ಸೇತುವೆ ಕುಸಿದು 134ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಜನರು ಗಾಯಗೊಂಡಿದ್ದಾರೆ. ಸೇತುವೆ ಕುಸಿತದ ಘಟನೆಯ ತನಿಖೆಗಾಗಿ ಗುಜರಾತ್ ಸರ್ಕಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.
ಮೊರ್ಬಿ ತೂಗು ಸೇತುವೆ ಕುಸಿತ : 9 ಜನರ ಬಂಧನ
