ಕಾರ್ಕಳ : ಮಲೆಕುಡಿಯ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2021-2022ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಟಿಸಿ, ಅಂಕಪಟ್ಟಿ ಪ್ರತಿ, ಒಂದು ಪಾಸ್ಪೊರ್ಟ್ ಪೋಟೋ ದಾಖಲೆಗಳನ್ನು ನ. 30ರೊಳಗೆ ಕಾರ್ಕಳ ತಾಲೂಕು ಮಾಳ ಗ್ರಾಮದ ಪೇರಡ್ಕದಲ್ಲಿರುವ ಮಲೆಕುಡಿಯ ಸಂಘದ ಕೇಂದ್ರ ಕಛೇರಿಗೆ ಸಲ್ಲಿಸಬೇಕು ಮತ್ತು ಹೆಚ್ಚಿನ ಮಾಹಿತಿಗೆ ಮೊ.7019248535 ಸಂಪರ್ಕಿಸಲು ಕೋರಲಾಗಿದೆ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.