ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ

ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ: ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಕೆ ರಘುಪತಿ ಭಟ್ ಅವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.
ಸಮಾರಂಭದಲ್ಲಿ ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಂದ್ರ ಅಡಿಗ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest Articles

error: Content is protected !!