Saturday, December 10, 2022
spot_img
Homeಸುದ್ದಿಭಾರತದ 26 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್‌

ಭಾರತದ 26 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್‌

ದ್ವೇಷ ಹರಡುವುದರ ವಿರುದ್ಧ ಕ್ರಮ

ಹೊಸದಿಲ್ಲಿ : ವಾಟ್ಸ್‌ಆ್ಯಪ್ ಕಳೆದ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ 26 ಲಕ್ಷ 85 ಸಾವಿರ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ನಿಷೇಧಿಸುವ ಮುನ್ನ ಬಳಕೆದಾರರನ್ನು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು.
ಆಗಸ್ಟ್‌ನಲ್ಲಿ 23 ಲಕ್ಷ 28 ಸಾವಿರ ಖಾತೆಗಳನ್ನು ನಿಷೇಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ.
“ಸೆಪ್ಟೆಂಬರ್ 1, 2022 ರಿಂದ ಸೆಪ್ಟೆಂಬರ್ 30, 2022 ರ ನಡುವೆ, 26, 85,000 ವಾಟ್ಸ್‌ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಖಾತೆಗಳಲ್ಲಿ 8,72,000 ಬಳಕೆದಾರರನ್ನು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸ್‌ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಬಳಕೆದಾರರ ಸುರಕ್ಷತೆ ವರದಿ ತಿಳಿಸಿದೆ.
ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳು, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಸ್ವೀಕರಿಸಿದ ದೂರುಗಳ ವಿವರಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತ ವರದಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳ ಮೂಲಕ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳುತ್ತಿವೆ.

LEAVE A REPLY

Please enter your comment!
Please enter your name here

Most Popular

error: Content is protected !!