ಎನ್ಐಎ ಪ್ರಕಟಣೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್
ಬೆಂಗಳೂರು: ಹಿಂದು ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಘೋಷಿಸಿದೆ.
ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಎನ್ಐಎ , ಒಟ್ಟು 14 ಲಕ್ಷ ರೂಪಾಯಿ ಬಹುಮಾನ ಘೋಷಿಸಿ ಪ್ರಕಟಣೆ ಹೊರಡಿಸಿದೆ. ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ.ಹಾಗೂ ಇನ್ನಿಬ್ಬರ ಬಗ್ಗೆ ಮಾಹಿತಿ ತಿಳಿಸಿದರೆ ತಲಾ 2 ಲಕ್ಷ ರೂ.ಬಹುಮಾನ ನೀಡುವುದಾಗಿ ಎನ್ಐಎ ಹೇಳಿದೆ.
ಆರೋಪಿಗಳಾದ ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 5 ಲಕ್ಷ ರೂಪಾಯಿ, ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವ ಮಾಹಿತಿ ಎನ್ಐಎ ಪ್ರಕಟಣೆಯಲ್ಲಿದೆ.
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಬೆಳ್ಳಾರೆಯ ಅವರ ಕೋಳಿ ಅಂಗಡಿ ಸಮೀಪವೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದುವರೆಗೆ ಶಿಯಾಬ್, ರಿಯಾಜ್ ಮತ್ತು ಬಶೀರ್ ಎಂಬ ಮೂವರು ಆರೋಪಿಗಳನ್ನಷ್ಟೇ ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಉಳಿದ ಆರೋಪಿಗಳಿಗೆ ಶೋಧ ಮುಂದುವರಿದಿದೆ.