ನಂದಳಿಕೆ : ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಜಾನಪದ ಪರಿಷತ್ತು ಕಾರ್ಕಳ ತಾಲೂಕು ಘಟಕ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ, ನಂದಳಿಕೆ ವರಕವಿ ಮುದ್ದಣನ ಊರಿನ ರಂಗಮಂದಿರದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಪುಷ್ಪರ್ಚನೆಯನ್ನು ಸಲ್ಲಿಸಿದ ಕ್ಲಬ್‍ನ ಅಧ್ಯಕ್ಷ ನಂದಳಿಕೆ ಪ್ರಶಾಂತ್ ಪೂಜಾರಿ ಮಾತನಾಡಿ ಸಮೃದ್ಧ, ಸದೃಢ, ಸ್ವಾಭಿಮಾನದ ಕರ್ನಾಟಕಕ್ಕಾಗಿ ನಾವೆಲ್ಲರೂ ಪಣತೊಡಬೇಕಾಗಿದೆ ಎಂದರು. ಕನ್ನಡ ಜಾನಪದ ಪರಿಷತ್ತು ಘಟಕದ ಅಧ್ಯಕ್ಷ ದೇವದಾಸ್ ಮಾತನಾಡಿ ರಾಜ್ಯದ ಸಂಸ್ಕೃತಿ ಮತ್ತು ಇತಿಹಾಸವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮಿಂದಾಗಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಚಾಲಕ ಚಂದ್ರನಾಥ್ ಬಜಗೋಳಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ದೈವನರ್ತಕ ಬೋಳ ಕೃಷ್ಣಪ್ಪ ಪಾಣರ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಬೋಳ ನಮಿತಾ ಮತ್ತು ಪದ್ಮಶ್ರೀ ಪೂಜಾರಿ ನಾಡಗೀತೆ ಹಾಡಿದರು. ದೇವದಾಸ್ ಸ್ವಾಗತಿಸಿ, ಲಲಿತಾ ಆಚಾರ್ಯ ವಂದಿಸಿದರು. ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ಶೆಟ್ಟಿ ಸನ್ಮಾನಿತರ ಪರಿಚಯ ವಾಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಮಿತಾ ಮತ್ತು ತಂಡದವರಿಂದ ಕನ್ನಡ ಗೀತಾ ಗಾಯನ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಜರಗಿತು.