Thursday, December 1, 2022
spot_img
Homeಸುದ್ದಿಶಾಸಕರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡಹುವ ಯತ್ನ

ಶಾಸಕರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡಹುವ ಯತ್ನ

ಯುವತಿಯಿಂದ ಬೆಳ್ಳಂಬೆಳಗ್ಗೆ ಮೊಬೈಲ್‌ಗೆ ಅಸಭ್ಯ ವೀಡಿಯೊ ಕರೆ

ಚಿತ್ರದುರ್ಗ : ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿಯವರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲು ಯುವತಿಯೊಬ್ಬಳು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಎರಡು ದಿನಗಳ ಹಿಂದೆ ಶಾಸಕರು ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸುವ ಸಂದರ್ಭದಲ್ಲಿ ಅಪರಿಚಿತ ಯುವತಿಯೊಬ್ಬಳು ನಗ್ನವಾಗಿದ್ದುಕೊಂಡು ವೀಡಿಯೊ ಕಾಲ್ ಮಾಡಿದ್ದಾಳೆ. ಕೂಡಲೇ ಎಚ್ಚೆತ್ತುಕೊಂಡ ಶಾಸಕ ತಿಪ್ಪಾರೆಡ್ಡಿ ಅವರು ಕಾಲ್ ಕಟ್‌ ಮಾಡಿದ್ದಾರೆ. ಆರೋಪಿಗಳು ಶಾಸಕರನ್ನು ಹನಿಟ್ರ್ಯಾಪ್‌ ಮಾಡಿ ಹಣ ವಸೂಲಿ ಮಾಡುಲು ಯತ್ನಿಸಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಶಾಸಕ ತಿಪ್ಪಾರೆಡ್ಡಿ ಚಿತ್ರದುರ್ಗ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಶಾಸಕರ ದೂರು ದಾಖಲು ಮಾಡಿಕೊಂಡ ಪೊಲೀಸರು ದಾಖಲೆಗಳನ್ನು ಕಲೆ ಹಾಕಿ, ಕಾಲ್ ಮಾಡಿದ ಯುವತಿ ಅಥವಾ ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಗ್ಯಾಂಗ್‌ ಪತ್ತೆಗೆ ಬಲೆ ಬೀಸಿದ್ದಾರೆ. ಶಾಸಕರು ನೀಡಿದ ಮಾಹಿತಿ ಮೇರೆಗೆ ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಪರಿಚಿತ ಮಹಿಳೆಯಿಂದ ವಾಟ್ಸಪ್‍ನಲ್ಲಿ ವಿಡಿಯೋ ಕಾಲ್ ಬಂದಿತ್ತು. ಕ್ಷೇತ್ರದ ಜನರು ಅಥವಾ ಸಂಬಂಧಿಕರು ಎಂದು ಕಾಲ್ ರಿಸೀವ್ ಮಾಡಿದೆ. ಆದರೆ ಅವರ ಭಾಷೆ ನನಗೆ ಅರ್ಥವಾಗಿಲ್ಲ. ಆ ಸಮಯದಲ್ಲಿ ನನ್ನ ಪತ್ನಿಗೆ ತಿಳಿಸಿ ತಕ್ಷಣ ಆ ನಂಬರ್ ಅನ್ನು ಬ್ಲಾಕ್ ಮಾಡಿಸಿದೆ. ಘಟನೆಯ ಕುರಿತು ಯಾರ ಮೇಲೂ ನನಗೆ ಅನುಮಾನವಿಲ್ಲ. ನನಗೆ ಯಾರು ವಿರೋಧಗಳಿಲ್ಲ ಎದು ತಿಪ್ಪಾರೆಡ್ಡಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!