ನ. 5ರಿಂದ 12 : ಬಜಗೋಳಿಯಲ್ಲಿ 1611ನೇ ಮದ್ಯವರ್ಜನ ಶಿಬಿರ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಉಜಿರೆಯ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನ.5 ರಿಂದ 12 ರವರೆಗೆ ಬಜಗೋಳಿಯ ನಾರಾಯಣಗುರು ಸಮುದಾಯ ಭವನದಲ್ಲಿ 1611ನೇ ಮದ್ಯವರ್ಜನ ಶಿಬಿರ ನಡೆಯಲಿದೆ.

ಉದ್ಘಾಟನಾ ಸಮಾರಂಭವು ನ.5ರಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದ್ದು, ರಾಜಾಪುರ ಸಾರಸ್ವತ ಕ್ರೇಡಿಟ್‌ ಕೋ-ಅಪರೇಟಿವ್‌ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಉದ್ಘಾಟನೆ ಮಾಡಲಿದ್ದಾರೆ. ಬಜಗೋಳಿಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಕಳ ಪೋಲಿಸ್‌ ಠಾಣೆಯ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌, ಉಡುಪಿ ಜಿಲ್ಲೆಯ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಟ್ರಸ್ಟ್‌ನ ನಿರ್ದೆಶಕ ಶಿವರಾಯ ಪ್ರಭು, ಬಜಗೋಳಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ, ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅನಿಲ್‌ ಎಸ್.‌ ಪೂಜಾರಿ, ಕಾರ್ಕಳ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಅಂಡಾರು ಮಹಾವೀರ ಹೆಗ್ಡೆ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಉದಯ್‌ ಕುಮಾರ್‌ ಶೆಟ್ಟಿ ಇನ್ನಾ, ಕಮಾಲಾಕ್ಷ ನಾಯಕ್‌, ಉದಯ್‌ ಹೆಗ್ಡೆ ಬೈಲೂರು, ಮುಡಾರು ಗ್ರಾ. ಪಂ. ಅಧ್ಯಕ್ಷ ಸುರೇಶ್‌ ಶೆಟ್ಟಿ, ಮಾಳ ಗ್ರಾ. ಪಂ. ಅಧ್ಯಕ್ಷೆ ರಕ್ಷಿತಾ ಶೆಟ್ಟಿ, ಸಿವಿಲ್‌ ಇಂಜೀನಿಯರ್‌ ಹಿತೇಶ್‌ ಶೆಟ್ಟಿ ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಬಜಗೋಳಿ ವಲಯಾಧ್ಯಕ್ಷೆ ಜಯಲಕ್ಷ್ಮೀ ಉಪಸ್ಥಿತರಿರಲಿದ್ದಾರೆ.

ಸಮಾರೋಪ ಸಮಾರಂಭ:
ನ.12 ರ ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಸ್‌ ಚಂದ್ರ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್‌, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜಾಧ್ಯಕ್ಷ ರಾಜಣ್ಣ ಮಲ್ಲಿಕಾರ್ಜುನ ಕೊರವಿ, ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್‌, ಅ.ಕ.ಜ.ಜಾ.ವೇದಿಕೆ ಟ್ರಸ್ಟ್‌ನ ನಿಕಟಪೂರ್ವ ರಾಜಾಧ್ಯಕ್ಷ ದೇವದಾಸ್‌ ಹೆಬ್ಬಾರ್‌, ಫೆಡರೇಷನ್‌ ಆಫ್‌ ಕರ್ನಾಟಕ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ನ ರಾಜಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಅ.ಕ.ಜ.ಜಾ.ವೇದಿಕೆ ಟ್ರಸ್ಟ್‌ನ ಪ್ರಾದೇಶಿಕ ನಿರ್ದೆಶಕ ವಿವೇಕ್‌ ವಿನ್ಸೆಂಟ್‌ ಪಾಯಸ್‌, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್‌ ಅಮೀನ್‌, ಉದ್ಯಮಿ ರಘುವೀರ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಮಹಾವೀರ ಜೈನ್‌, ಹರಿಶ್ಚಂದ್ರ ತೆಂಡೂಲ್ಕರ್‌, ಪ್ರೇಮ್‌ ಕುಮಾರ್‌, ನಲ್ಲೂರು ಗ್ರಾ.ಪಂ. ಅಧ್ಯಕ್ಷೆ ಕವಿತಾ ಸಂತೋಷ್‌ ಪೂಜಾರಿ, ಡಾ| ವೆಂಕಟಗಿರಿ, ಮತ್ತು ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಪ್ರವೀಣ್‌ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.error: Content is protected !!
Scroll to Top