Saturday, December 10, 2022
spot_img
Homeಸುದ್ದಿಟಿಕೆಟ್‌ಗೆ 2 ಲ.ರೂ. ಡೊನೇಶನ್‌, 5 ಸಾವಿರ ರೂ. ಶುಲ್ಕ ಕೊಡಿ

ಟಿಕೆಟ್‌ಗೆ 2 ಲ.ರೂ. ಡೊನೇಶನ್‌, 5 ಸಾವಿರ ರೂ. ಶುಲ್ಕ ಕೊಡಿ

ಕೈ ಟಿಕೆಟ್‌ ಬೇಕಾದರೆ ಕೈ ಬಿಚ್ಚಿ ಕೊಡಬೇಕು ದೇಣಿಗೆ

ಬೆಂಗಳೂರು : ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಂಡಿರುವ ಕಾಂಗ್ರೆಸ್‌ ಇದೀಗ ಸ್ಪರ್ಧಿಸಲು ಬಯಸುವವರು ಟಿಕೆಗಾಗಿ ತುಸು ಕೈಬಿಚ್ಚಬೇಕೆಂದು ಹೇಳಿದೆ. ಟಿಕೆಟ್‌ ಆಕಾಂಕ್ಷಿಗಳು ಪಕ್ಷಕ್ಕೆ 2 ಲ.ರೂ. ಡೊನೇಶನ್‌ ಮತ್ತು ಟಿಕೆಟ್‌ ಶುಲ್ಕ 5 ಸಾವಿರ ರೂ. ಕೊಡುವುದು ಕಡ್ಡಾಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಆದರೆ ಪಕ್ಷದ ಕಟ್ಟಡ ಕಾಮಗಾರಿಗೆ 2 ಲಕ್ಷ ರೂಪಾಯಿ ಡೊನೇಷನ್ ನೀಡುವುದು ಕಡ್ಡಾಯ. ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಹಾಕಬಹುದು ಎಂದು ಹೇಳಿದ್ದಾರೆ.
ಟಿಕೆಟ್ ಬಯಸಿ ಸಲ್ಲಿಸುವ ಅರ್ಜಿಗೆ 5 ಸಾವಿರ ರು. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ. ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ. 50 ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು.
ಪಕ್ಷ ಬಿಟ್ಟು ಹೋದವರೂ ಮರಳಿ ಬರಲು ಅರ್ಜಿ ಸಲ್ಲಿಸಬಹುದು. ಈ ವಿಚಾರದಲ್ಲಿ ಮುಕ್ತ ಅವಕಾಶ ನೀಡಿದ್ದೇವೆ. ಅದಕ್ಕಾಗಿ ಒಂದು ಸಮಿತಿ ಇದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವ ಯಾರು ಬೇಕಾದರೂ ಅರ್ಜಿ ಹಾಕಬಹುದು. ನಾವು ಎಲ್ಲ ನಾಯಕರ ಜತೆ ಚರ್ಚೆ ಮಾಡಿ, ಪಕ್ಷದ ಅಧ್ಯಕ್ಷನಾಗಿ ಈ ವಿಚಾರ ತಿಳಿಸುತ್ತಿದ್ದೇನೆ. ಯಾರನ್ನು ಸೇರಿಸಿಕೊಳ್ಳಬೇಕು ಯಾರನ್ನು ಸೇರಿಸಿಕೊಳ್ಳಬಾರದು ಎಂಬ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ ಎಂದರು.
ಪಕ್ಷದ ಟಿಕೆಟ್‌ಗೆ ಹಣ ನೀಡಲು ಮಾನದಂಡವಿಲ್ಲ. ನಮಗೆ ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಮುಖಪುಟದ ಜಾಹೀರಾತು ನೀಡಲು ನಮ್ಮ ಬಳಿ ಸರ್ಕಾರ ಇಲ್ಲ. ಪಕ್ಷಕ್ಕೆ 20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಎಲ್ಲ ಬಿಜೆಪಿಗೆ ಹೋಗುತ್ತಿದೆ. ಹೀಗಾಗಿ ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!