ಗುಜರಾತ್‌ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌

ಡಿ.1, 5ರಂದು ಎರಡು ಹಂತಗಳಲ್ಲಿ ಮತದಾನ; ಡಿ. 8ಕ್ಕೆ ಫಲಿತಾಂಶ

ಹೊಸದಿಲ್ಲಿ : ಗುಜರಾತ್‌ ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಎರಡು ಹಂತಗಳಲ್ಲಿ ನಡೆಯುವ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಮೊದಲ ಹಂತದ ಮತದಾನ ಡಿ.1ರಂದು ಮತ್ತು ಎರಡನೇ ಹಂತದ ಮತದಾನ ಡಿ.5ರಂದು ನಡೆಯಲಿದೆ. ಡಿ.8ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ನ.5ಕ್ಕೆ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ಮೊದಲ ಹಂತದ ಚುನಾವಣೆಗೆ ನ.14 ನಾಮಪತ್ರ ಸಲ್ಲಿಸಲು ಕೊನೇ ದಿನ. ನ.15ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.17 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೇ ದಿನ.
ಎರಡನೇ ಹಂತದ ಚುನಾವಣೆಗೆ ಅಧಿಸೂಚನೆ ನ.10ರಂದು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೇ ದಿನ ನ.17. ನ.18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.21 ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಕೊನೇ ದಿನ.
ಗುಜರಾತ್‌ ಸರ್ಕಾರದ ಅವಧಿ 2023ರ ಫೆಬ್ರವರಿ 23ರಂದು ಅಂತ್ಯಗೊಳ್ಳುತ್ತದೆ. ಈ ಹಿನ್ನೆಲೆ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವುದಕ್ಕೆ ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ತೊಂದರೆಗಳ ಹಿನ್ನೆಲೆ ಒಂದು ತಿಂಗಳ ಅಂತರದಲ್ಲಿ ಎರಡು ರಾಜ್ಯಗಳ ಚುನಾವಣೆ ನಡೆಸುವುದಕ್ಕೆ ಕೇಂದ್ರ ಆಯೋಗವು ನಿರ್ಧರಿಸಿದೆ.

Latest Articles

error: Content is protected !!