Tuesday, December 6, 2022
spot_img
Homeಸುದ್ದಿಹೆಬ್ರಿ: ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ- ವಾಯ್ಸ್ ಆಫ್ ಚಾಣಕ್ಯ ಆಯ್ಕೆ ಪ್ರಕ್ರಿಯೆ

ಹೆಬ್ರಿ: ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ- ವಾಯ್ಸ್ ಆಫ್ ಚಾಣಕ್ಯ ಆಯ್ಕೆ ಪ್ರಕ್ರಿಯೆ

ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವ ಚಾಣಕ್ಯ ಸಂಸ್ಥೆಯ ಕಾರ್ಯ ಶ್ಲಾಘನೀಯ-ಲಕ್ಷ್ಮಿನಾರಾಯಣ ನಾಯಕ್

ಹೆಬ್ರಿ: 8 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸಂಗೀತ ತರಬೇತಿ ನೀಡುವುದರ ಜೊತೆಗೆ ಪ್ರತಿ ವರ್ಷ ಸಂಗೀತ ಸ್ಪರ್ಧೆ ಏರ್ಪಡಿಸಿ ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಾಧನೆ ಶ್ಲಾಘನೀಯ ಎಂದು ಕನ್ಯಾನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಹೇಳಿದರು.

ಅವರು ನ.1ರಂದು ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಇದರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಚಾಣಕ್ಯ ಟ್ಯೂಟೋರಿಯಲ್ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ ವಾಯ್ಸ್ ಆಫ್ ಚಾಣಕ್ಯ-2022ರ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅತಿ ಕಡಿಮೆ ಅಂಕ ಪಡೆದವರನ್ನು ತಮ್ಮ ಸಂಸ್ಥೆಯಲ್ಲಿ ಸೇರಿಸಿಕೊಂಡು ಅವರಿಗೆ ಉತ್ತಮ ತರಬೇತಿ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಚಾಣಕ್ಯ ಸಂಸ್ಥೆಯ ಪಾತ್ರ ಮಹತ್ತರವಾದದ್ದು ಈ ಸಮಾಜಮುಖಿ ಕಾರ್ಯ ನಿರಂತರವಾಗಿ ಮುಂದುವರಿಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಾರ ನವೋದಯ ವಿದ್ಯಾಲಯದ ಸಂಗೀತ ಶಿಕ್ಷಕ ಮಹಾದೇವ ಮಾತನಾಡಿ, ಪೋಷಕರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ಬೇಕಾದ ಸರಿಯಾದ ತರಬೇತಿ ನೀಡಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.

ಚಾಣಕ್ಯ ಟ್ಯುಟೋರಿಯಲ್ ಕಾಲೇಜು ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ಶಿಕ್ಷಕಿ ಸ್ಮಿತಾ ಭಟ್, ಸಂಗೀತ ನಿದೆ೯ಶಕ ರಮೇಶ್ ಡಿ.ಚಾಂತಾರು ತೀರ್ಪುಗಾರರಾಗಿ ಭಾಗವಹಿಸಿದ್ದರು.

ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ದೀಪಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಮುದ್ರಾಡಿ ಪ್ರೌಢಶಾಲೆ ಆಂಗ್ಲಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!