ಜ್ಞಾನಸುಧಾ: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ – ಸಮಾರೋಪ ಸಮಾರಂಭ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಎನ್.ಎಸ್.ಎಸ್. ಪಾತ್ರ ಮಹತ್ವವಾದದ್ದು- ದಿನೇಶ್.ಎಂ.ಕೊಡವೂರ್

ಕುಕ್ಕುಂದೂರು: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಮಹತ್ವವಾದದ್ದು ಇಂತಹ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ಅನುಭವ ಅವರ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಕಾಲೇಜಿನ ರಾ.ಸೇ.ಯೋ. ಘಟಕದ ವತಿಯಿಂದ ನ.3ರಂದು ಕುಕ್ಕುಂದೂರು ಶ್ರೀದುರ್ಗಾ ದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂತಹ ಶಿಬಿರ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಂತಹ ಬದುಕಿನ ಮೌಲ್ಯವನ್ನು ಕಲಿಸುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣೆಗೆಗೆ ಸಹಕರಿಸುತ್ತದೆ ಎಂದರು.

ವಿಜೇತರಿಗೆ ಬಹುಮಾನ:
ಈ ಸಂದರ್ಭ ಶಿಬಿರಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಜೊತೆಗೆ 2022-23ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಸ್ವಯಂ ಸೇವಕರಾಗಿ ಬ್ರಾಯನ್ ವಿಕ್ಕಿ ಡಿ’ಸೋಜ ಮತ್ತು ಕು.ವರ್ಷಾರವರನ್ನು ಗುರುತಿಸಿದರು.

ಕಾರ್ಯಕ್ರಮದಲ್ಲಿ ಕುಕ್ಕುಂದೂರು ಗ್ರಾ. ಪಂ. ಸದಸ್ಯ ರೆಹಮುತುಲ್ಲಾ, ಶ್ರೀ ದುರ್ಗಾದೇವಿ ಅ.ಹಿ.ಪ್ರಾ. ಶಾಲೆಯ ಸಂಚಾಲಕ ರಾಜೇಂದ್ರ ಬಳ್ಳಾಳ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಕಮಲಾಕ್ಷ ನಾಯಕ್, ಮುಖ್ಯೋಪಾಧ್ಯಾಯಿನಿ ಸುಜಾತ. ಎನ್. ರಾಜ್, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಉಡುಪಿ ಜ್ಞಾನಸುಧಾ ಪ್ರಿನ್ಸಿಪಾಲ್ ಗಣೇಶ್ ಶೆಟ್ಟಿ, ಉದ್ಯಮಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್, ವಿಠಲ ಶೆಟ್ಟಿ , ಎನ್‌ಎಸ್‌ಎಸ್‌ ವಿದ್ಯಾರ್ಥಿ ನಾಯಕರಾದ ಪ್ರಸನ್ನ ಹಾಗೂ ಸ್ವಾತಿ ಶೆಟ್ಟಿ ಉಪಸ್ಥಿತರಿದ್ದರು. ಸಹ ಶಿಬಿರಾಧಿಕಾರಿ ಕು.ಶಮಿತಾ ಕಾರ್ಯಕ್ರಮ ನಿರ್ವಹಿಸಿ, ಮುಖ್ಯ ಶಿಬಿರಾಧಿಕಾರಿ ರವಿ.ಜಿಯವರು ವಂದಿಸಿದರು.













































error: Content is protected !!
Scroll to Top