Thursday, December 1, 2022
spot_img
Homeಸ್ಥಳೀಯ ಸುದ್ದಿಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗೋವು ಹುಂಡಿ ಕಾಣಿಕೆ ಹಸ್ತಾಂತರ

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗೋವು ಹುಂಡಿ ಕಾಣಿಕೆ ಹಸ್ತಾಂತರ

ಕಾರ್ಕಳ : ದೀಪಾವಳಿ ಹಬ್ಬದ ಪ್ರಯುಕ್ತ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗೋ ಪೂಜೆ ನ.3 ರಂದು ತೆಳ್ಳಾರು ವೆಂಕಟರಮಣ ಗೋ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಚೇರಿಯಲ್ಲಿ ಸ್ಥಾಪಿಸಿದ್ದ ಗೋವು ಹುಂಡಿ ಕಾಣಿಕೆಯನ್ನು ಗೋ ಶಾಲೆಯ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್ ಹಾಗೂ ರೇಶ್ಮಾ ಉದಯ್ ಶೆಟ್ಟಿ, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಯಾ ಡಿ. ಬಂಗೇರ ಹಾಗೂ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!