ಮಾಜಿ‌ ಸಂಸದ ಎಸ್​.ಪಿ.ಮುದ್ದಹನುಮೇಗೌಡ, ಶಶಿಕುಮಾರ್ ಮತ್ತು ಅನಿಲ್ ​ಕುಮಾರ್​ ಬಿಜೆಪಿ ಸೇರ್ಪಡೆ

ಬೆಂಗಳೂರು : ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ನಟ ಶಶಿಕುಮಾರ್ ಇಂದು(ಗುರುವಾರ) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು.
ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಸಾಲೆ ಜಯರಾಂ, ಸಿ.ಪಿ.ಯೋಗೀಶ್ವರ್, ರಾಜ್ಯಸಭಾ ಸದಸ್ಯ ಜಗ್ಗೇಶ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.

Latest Articles

error: Content is protected !!