ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಕೆಂಪುಕೋಟೆಯ ಮೇಲೆ 22 ವರ್ಷದ ಹಿಂದೆ ನಡೆದ ಭಯೋತ್ಪಾದಕ ದಾಳಿಯ ಆರೋಪಿ ಲಷ್ಕರ್ ಎ ತಯ್ಯಬದ ಉಗ್ರ ಮೊಹಮ್ಮದ್ ಆರಿಫ್ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀ ಕೋರ್ಟ್ ಎತ್ತಿಹಿಡಿದಿದೆ.
ಗಲ್ಲು ಶಿಕ್ಷೆ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೋ ಕೋರ್ಟ್ ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರ ನ್ಯಾಯಪೀಠ ಈ ತೀರ್ಪು ನೀಡಿದೆ.
2000ನೇ ಇಸವಿಯ ಡಿ.2ರಂದು ಉಗ್ರರು ಕೆಂಪುಕೋಟೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದರು. ಇಬ್ಬರು ಸೈನಿಕರು ಸೇರಿ ಮೂವರು ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ.