ಭೋಪಾಲ : ಮಧ್ಯಪ್ರದೇಶದ ಬೇತುಲ್ನಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರ್ಗಾಂವ್ ಮತ್ತು ಭೈಸ್ದೇಹಿ ರಸ್ತೆಯಲ್ಲಿ ಇಂದು ನಸುಕಿನ ಜಾವ ಈ ದಾರುಣ ಘಟನೆ ನಡೆದಿದೆ.ಬಸ್ಸು ಕಾರಿಗೆ ದಿತ್ತಿ ಹೊಡೆದಿದ್ದು, ಡಿಕ್ಕಿಯ ಬಿರುಸಿಗೆ ಕಾರಿನ ಮುಂಭಾಗ ಪೂರ್ತಿ ಜಖಂಗೊಂಡಿದೆ.