ಕಾರ್ಕಳ: ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ಬಲಿದಾನ ದಿವಸದ ಪ್ರಯುಕ್ತ ನ.6 ರಂದು ಪುಲ್ಕೇರಿಯ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ ನಡೆಯಲಿದೆ. ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಬೋರ್ಕಟ್ಟೆ ಗಣಪತಿ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ರಂಗಭೂಮಿ ಕಲಾವಿದ ಸುನಿಲ್ ನೆಲ್ಲಿಗುಡ್ಡೆ ಹಿತಚಿಂತಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಎಂ. ಕೆ. ಸುವೃತ್ ಕುಮಾರ್, ಬಜರಂಗದಳದ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್. ಹಾಗೂ ಜಿಲ್ಲಾ ಸಹ ಸಂಚಾಲಕ ಚೇತನ್ ಪೇರಲ್ಕೆ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನ.6 : ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ರಕ್ತದಾನ ಶಿಬಿರ
