ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಎಸ್. ವಿ. ಟಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾ ಕೂಟದಲ್ಲಿ ಕ್ರೈಸ್ಟ್ಕಿಂಗ್ನ 9ನೇ ತರಗತಿಯ ವಿದ್ಯಾರ್ಥಿನಿ ಸುದೀಕ್ಷಾ 100 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿ ತಾಲೂಕು ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.