ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್. ರೆಡ್ಡಿ ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಇನ್‌ಸ್ಟಾ ಗ್ರಾಂ ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ ಇದರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಇದೀಗ ಆಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಕೇಳಿದ್ದಾಳೆ.
ದೈವದ ರೀಲ್ಸ್ ಮಾಡಿದ್ದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ
