ಬೆಂಗಳೂರು : ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ? ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ? ಎಂದು ಕೇಳಿದ್ದಾರೆ.
ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು.
ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಎಂದು ಕೇಳಿದ್ದಾರೆ.
ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ : ಸಿದ್ದು ಟ್ವೀಟ್ಗೆ ಸಚಿವ ನಾಗೇಶ್ ತಿರುಗೇಟು
