ಪಿಎಫ್‌ಐ ಮುಖಂಡರ ಮನೆ ಮೇಲೆ ಮತ್ತೆ ಎನ್‌ಐಎ ದಾಳಿ

ಬೆಳ್ಳಾರೆಯಲ್ಲಿ ಕಾರ್ಯದರ್ಶಿ ಸಹಿತ ಕೆಲವರ ಬಂಧನ

ಬೆಂಗಳೂರು : ನಿಷೇಧಿತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ಇಂದು ಬೆಳ್ಮಳಂಬೆಳಗ್ತ್ತೆಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ನಿಷೇಧಿತ ಪಿಎಫ್​ಐ ಮುಖಂಡರಿಗಾಗಿ ಎನ್​ಐಎ ತಲಾಶ್ ನಡೆಸುತ್ತಿದೆ.
ಬೆಳ್ಳಾರೆಯಲ್ಲಿ ಎಸ್‌ಡಿಪಿಐ ಕಾರ್ಯದರ್ಶಿ ಬಂಧನ
ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಎನ್ಐಎ ಇಂದು ಬೆಳ್ಳಂಬೆಳಗ್ಗೆ ಬೆಳ್ಳಾರೆಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್​ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬಂಧಿಸಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳದ ಶೋಧ ಕಾರ್ಯ ನಡೆಸುತ್ತಿದೆ. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಎನ್​ಐಎ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿಕೊಳ್ಳಲಾಗುತ್ತಿದೆ.

Latest Articles

error: Content is protected !!