Saturday, December 10, 2022
spot_img
Homeಸುದ್ದಿರಾಜ್ಯಕ್ಕೆ ಹರಿದು ಬರಲಿದೆ 9 ಲಕ್ಷ ಕೋಟಿ ರೂ. ಹೂಡಿಕೆ

ರಾಜ್ಯಕ್ಕೆ ಹರಿದು ಬರಲಿದೆ 9 ಲಕ್ಷ ಕೋಟಿ ರೂ. ಹೂಡಿಕೆ

ನಿರೀಕ್ಷೆಗೂ ಮೀರಿ ಯಶಸ್ವಿಯಾದ ಹೂಡಿಕೆದಾರರ ಸಮಾವೇಶ- ಇಂಧನ ಕ್ಷೇತ್ರದಲ್ಲಿ ಗರಿಷ್ಠ ಹೂಡಿಕೆ

ಬೆಂಗಳೂರು: ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಹಮ್ಮಿಕೊಳ್ಳಲಾಗಿದ್ದ 3 ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಬರೋಬ್ಬರಿ ರೂ.9.08 ಲಕ್ಷ ಕೋಟಿ ಮೊತ್ತದ ಬಂಡವಾಳ ಹೂಡಿಕೆ ಒಪ್ಪಂದ ಘೋಷಣೆಯಾಗಿದೆ.
ಈ ಮೂಲಕ 5ನೇ ಜಾಗತಿಕ ಹೂಡಿಕೆದಾರರ ಸಮಾವೇಶ ಬಂಡವಾಳ ಆಕರ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ರೂ.5 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಿದ್ದ ಸಮಾವೇಶದಲ್ಲಿ ನಿರೀಕ್ಷೆಗಿಂತ ಹೆಚ್ಚು ಹೂಡಿಕೆ ಹರಿದು ಬಂದಿದೆ. ಬೆಂಗಳೂರಿನಲ್ಲಿ ನ.2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದ್ದರು.
ಈ ಹೂಡಿಕೆಯಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸುಮಾರು 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಅತಿ ಹೆಚ್ಚು ಹೂಡಿಕೆ ಸುನೀಲ್‌ ಕುಮಾರ್‌ ಸಚಿವರಾಗಿರುವ ಇಂಧನ ಕ್ಷೇತ್ರಕ್ಕೆ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!