Thursday, December 1, 2022
spot_img
Homeಸ್ಥಳೀಯ ಸುದ್ದಿಉಡುಪಿ(ನ.7) : ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಉಡುಪಿ(ನ.7) : ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಭಾಗಿ


ಉಡುಪಿ : ಉಡುಪಿ ಜಿಲ್ಲೆಯ ಕಾಪು ಬಸ್‌ ನಿಲ್ದಾಣದ ಬಳಿ ಜರುಗುವ ಜನಸಂಕಲ್ಪ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.1318 ಕೋಟಿ ಮೊತ್ತದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ನ.7 ರಂದು ನೆರವೇರಿಸಲಿರುವರು. ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇವರ ನೇತೃತ್ವದಲ್ಲಿ ಜನಸಂಕಲ್ಪ ಸಮಾವೇಶ ಜರುಗಲಿದ್ದು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ ಕುಮಾರ್‌ ಸ್ವಾಗತ ಕೋರಿದ್ದಾರೆ.
ಸೋಮವಾರ ಕಾಪುವಿನಲ್ಲಿ ನಡೆಯಲಿರುವ ಜನಸಂಕಲ್ಪ ಸಮಾವೇಶ ಹಾಗು ಬೈಂದೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕಸ್ಥಾಪನೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೊಮ್ಮಾಯಿ , ಯಡಿಯೂರಪ್ಪ ಹಾಗೂ ಇನ್ನಿತರ ನಾಯಕರು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಸಮಾವೇಶದಲ್ಲಿ ಬೃಹತ್‌ ಸಂಖ್ಯೆಯಲ್ಲಿ ಬೂತ್‌ ವ್ಯಾಪ್ತಿಯ ಫಲಾನುಭವಿಗಳು, ಪಕ್ಷದ ಹಿತೈಷಿಗಳು, ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!