Thursday, December 1, 2022
spot_img
Homeಸ್ಥಳೀಯ ಸುದ್ದಿಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಚಿತ ಕಣ್ಣಿನ ಶಿಬಿರ

ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಚಿತ ಕಣ್ಣಿನ ಶಿಬಿರ

ಕಾರ್ಕಳ : ಲಯನ್ಸ್ ಕ್ಲಬ್ ಕಾರ್ಕಳ, ಛತ್ರಪತಿ ಫೌಂಡೇಶನ್ ಶ್ರೀ ಕ್ಷೇತ್ರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಿರಿಯಂಗಡಿ ಫ್ರೆಂಡ್ಸ್ ಅಸೋಸಿಯೇಶನ್ ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಪ್ರಸಾದ್‌ ನೇತ್ರಾಲಯ ಸೂಪರ್ ಸ್ಟೇಷಾಲಿಟಿ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ನ.6ರಂದು ಬೆಳಿಗ್ಗೆ ಗಂಟೆ 9.30 ರಿಂದ 1ರ ತನಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಉದಯ್‌ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್‌ ಶೆಣೈ, ಪ್ರಸಾದ ನೇತ್ರಾಲಯದ ವೈದ್ಯೆ ಡಾ. ಸೀಮಾ, ಆಡಳಿತ ಮೊಕ್ತೇಸರ ಗಿರೀಶ್‌ ರಾವ್‌, ಗಣೇಶ್‌, ದಯಾನಂದ, ಸಿ.ಎ. ಹರೀಶ್‌ ಉಪಸ್ಥಿತರಿದ್ದರು. ಉಚಿತ ಕಣ್ಣಿನ ಶಿಬಿರದಲ್ಲಿ 180 ಜನರು ಪಾಲ್ಗೊಂಡು ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡರು. 44 ಮಂದಿಗೆ ಉಚಿತ ಶಸ್ತ್ರಚಿಕಿತ್ಸೆ ಮತ್ತು 72 ಮಂದಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here

Most Popular

error: Content is protected !!