Thursday, December 1, 2022
spot_img
Homeಸುದ್ದಿಇಂದು ಮೆಲ್ಬೋರ್ನ್‌ನಲ್ಲಿ ಭಾರತಕ್ಕೆ ಜಿಂಬಾಬ್ವೆ ಎದುರಾಳಿ

ಇಂದು ಮೆಲ್ಬೋರ್ನ್‌ನಲ್ಲಿ ಭಾರತಕ್ಕೆ ಜಿಂಬಾಬ್ವೆ ಎದುರಾಳಿ

ಭಾರತಕ್ಕೆ ಒತ್ತಡ ರಹಿತವಾಗಿ ಆಡುವ ಅವಕಾಶ

ಮೆಲ್ಬೋರ್ನ್‌: ಕ್ರಿಕೆಟ್‌ನಲ್ಲಿ ಯಾವ ಗಳೆಗೆಯಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಇಂದಿನ ಭಾರತ ಮತ್ತು ಜಿಂಬಾಬ್ವೆ ಪಂದ್ಯ ಆರಂಭವಾಗುವ ಮೊದಲೇ ನಡೆದ ಬೆಳವಣಿಗೆ ಸಾಕ್ಷಿ. ನೆದರ್‌ಲ್ಯಾಂಡ್ಸ್‌ ಮತ್ತು ದಕ್ಷಿಣ ಆಫ್ರಿಕ ಪಂದ್ಯ ಮುಗಿಯುವವರೆಗೂ ಇಂದು ಮಧ್ಯಾಹ್ನ 1.30ಕ್ಕೆ ಮೆಲ್ಬೋರ್ನ್‌ನಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಎಂಬಂತಿತ್ತು. ಆದರೆ ಅನಿರೀಕ್ಷಿತ ಫಲಿತಾಂಶದಲ್ಲಿ ದಕ್ಷಿಣ ಆಫ್ರಿಕ ಸೋತ ಬಳಿಕ ಭಾರತ ಈ ಪಂದ್ಯವನ್ನು ಆಡದೆಯೇ ಸೆಮಿ ಫೈನಲ್‌ ಪ್ರವೇಶಿಸಿ ಆಗಿದೆ. ಹೀಗಾಗಿ ಇಂದಿನ ಪಂದ್ಯವನ್ನು ಭಾರತ ಒತ್ತಡವಿಲ್ಲದೆ ನಿರಾಳವಾಗಿ ಆಡಬಹುದು.
ಮಧ್ಯಾಹ್ನ ಭಾರತ ತಂಡ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮೆಲ್ಬೋರ್ನ್​ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ 1.30ಕ್ಕೆ ಶುರುವಾಗಲಿದೆ. ಅರ್ಹತಾ ಸುತ್ತಿನ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 12ರ ಹಂತಕ್ಕೆ ಪ್ರವೇಶಿಸಿ ಪಾಕಿಸ್ತಾನ ವಿರುದ್ಧ ಒಂದು ರನ್ ಅಂತರದ ರೋಚಕ ಜಯ ಸಾಧಿಸಿದ ಜಿಂಬಾಬ್ವೆ ತಂಡವನ್ನು ರೋಹಿತ್ ಬಳಗ ಕಡೆಗಣಿಸುವಂತಿಲ್ಲ. ಬಾಂಗ್ಲಾ ಹಾಗೂ ನೆದರ್‌ಲ್ಯಾಂಡ್ಸ್‌ ತಂಡಗಳ ಎದುರು ವಿರೋಚಿತ ಹೋರಾಟ ಮಾಡಿದ್ದನ್ನೂ ಮರೆಯುವಂತಿಲ್ಲ. ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಕೆ.ಎಲ್. ರಾಹುಲ್ ಕೂಡ ಲಯ ಕಂಡುಕೊಂಡಿರುವುದು ಸಂತಸದ ವಿಚಾರ. ಕಳೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಇವರು ಅರ್ಧಶತಕ ಸಿಡಿಸಿ ಮಿಂಚಿದ್ದರು. ಆದರೆ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟ್ ಸದ್ದು ಮಡುತ್ತಿಲ್ಲ. ದಿನೇಶ್ ಕಾರ್ತಿಕ್ ಕೂಡ ಪದೇ ಪದೆ ವೈಫಲ್ಯ ಅನುಭವಿಸುತ್ತಿದ್ದಾರೆ. ಅರ್ಶ್​ದೀಪ್ ಸಿಂಗ್ ಪ್ರಮುಖ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಭುವನೇಶ್ವರ್, ಶಮಿ ಕೂಡ ಇವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಸ್ಪಿನ್ನರ್​ಗಳ ಬೆಂಬಲ ಇನ್ನಷ್ಟು ಬೇಕಿದೆ.

LEAVE A REPLY

Please enter your comment!
Please enter your name here

Most Popular

error: Content is protected !!