ಬಿಜೆಪಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಸುನೀಲ್ ಕುಮಾರ್ ಕರೆ
ಕಾರ್ಕಳ: ಮಿಯಾರು ಬಿಜೆಪಿ ಮಹಾಶಕ್ತಿ ಕೇಂದ್ರದ ಗ್ರಾಮ ಮಟ್ಟದ ಚುನಾವಣಾ ನಿರ್ವಹಣಾ ತಂಡದ ಸಭೆ ಕಾರ್ಕಳ ಸವಿತಾ ಹೋಟೆಲಿನ ಸಭಾಂಗಣದಲ್ಲಿ ಶನಿವಾರ ಮಿಯಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ್ ಎಸ್. ಕೋಟ್ಯಾನ್ ನೇತೃತ್ವದಲ್ಲಿ ನಡೆಯಿತು.ಬಿಜೆಪಿ ಕಾರ್ಕಳ ಕ್ಷೇತ್ರ ಅಧ್ಯಕ್ಷ ಮಹಾವೀರ್ ಹೆಗ್ಡೆ ಕಾರ್ಕಳದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಚುನಾವಣಾ ತಯಾರಿಯ ಬಗ್ಗೆ ಮಾರ್ಗದರ್ಶನ ನೀಡಿ ಸರಕಾರದ ಯೋಜನೆಗಳನ್ನು ಕಾರ್ಯಕರ್ತರ ಮೂಲಕ ಪ್ರತಿ ಮನೆಗೆ ತಲುಪಿಸಿ ಪಕ್ಷ ಬಲಗೊಳಿಸುವಂತೆ ತಿಳಿಸಿದರು. ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲ್ಯಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉದಯ ಎಸ್ ಕೋಟ್ಯಾನ್ , ಮಿಯಾರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬಲಿಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಸಾಣೂರು ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.