ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಸಂಭ್ರಮದಿಂದ ಸ್ವಾಗತಿಸಿದರು. ಸಾದಹಳ್ಳಿ ಟೋಲ್ಗೇಟ್ ಬಳಿ ಬೃಹತ್ ಹೂವಿನ ಹಾರ ಹಾಕಿ ಅದ್ಧೂರಿ ಸ್ವಾಗತ ಕೋರಲಾಯಿತು. ನಿಲ್ದಾಣದ ವಿಐಪಿ ಟರ್ಮಿನಲ್ನಲ್ಲಿಯೇ ಕಾಂಗ್ರೆಸ್ನ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಖರ್ಗೆ ಸಭೆ ನಡೆಸಿದರು. ಸಭೆಯ ಬಳಿಕ ಹಿರಿಯ ನಾಯಕರೊಂದಿಗೆ ಅರಮನೆ ಮೈದಾನದತ್ತ ತೆರಳಿದರು. ನಗರದಲ್ಲಿ ನಡೆಯಲಿರುವ ಹಲವು ಸಭೆಗಳಲ್ಲಿ ಪಾಲ್ಗೊಂಡ ಬಳಿಕ ಖರ್ಗೆ ಮತ್ತೆ ದೆಹಲಿಗೆ ಹಿಂದಿರುಗಲಿದ್ದಾರೆ.