ಪರಿಶಿಷ್ಟರ ಭೂ ಪರಿವರ್ತನೆ ಸರಳೀಕರಣ

ಶಾಸಕ ರಘುಪತಿ ಭಟ್‌ಗೆ ಅಭಿನಂದನೆ

ಕಾರ್ಕಳ: ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 10 ಸೆಂಟ್ಸ್‌ ವರೆಗಿನ ಜಮೀನನ್ನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ ಮಾಡಿಕೊಡಲು ಶ್ರಮಿಸಿದ ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಅಭಿನಂದಿಸಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನ.5 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರದ ಕುರಿತು ಶಾಸಕ ಕೆ. ರಘುಪತಿ ಭಟ್ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಇಟ್ಟು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿ ಈ ಕುರಿತಾಗಿ ಸರಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿ ಈ ಆದೇಶ ಮಾಡುವಲ್ಲಿ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ ಶಾಸಕ ರಘುಪತಿ ಭಟ್ ಅವರಿಗೆ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಇಂದು ಶಾಸಕ ರಘುಪತಿ ಭಟ್ ಅವರನ್ನು ಮನೆಗೆ ಹೊಗಿ ಅಭಿನಂದಿಸಿದರು.
ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಸುಂದರ್ ಕೆ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಕಾರ್ಯದರ್ಶಿ ಸುಜಿತ್ ಕಪ್ಪೆಟ್ಟು, ನಗರಸಭಾ ಸದಸ್ಯ ರಾಜು ಕೆ. ಸಂಪಾವತಿ, ನಗರ ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಕಿರಣ್ ಕಟ್ಟೆಗುಡ್ಡೆ, ದಲಿತ ಮುಖಂಡ ಎಸ್. ನಾರಾಯಣ್, ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಮಲ್ಪೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.













































error: Content is protected !!
Scroll to Top