ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ತುಳಸಿ ಹಬ್ಬದ ಆಚರಣೆ

ಕಾರ್ಕಳ : ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನ.5 ರಂದು ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ಅರಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲ ವಿದ್ವಾನ್‌ ಗಣಪತಿ ಭಟ್‌ ತಿಳಿಸಿದರು.

ಸಂಸ್ಥಾಪಕ ಅಶ್ವಥ್‌ ಎಸ್‌. ಎಲ್‌. ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ ಮೌಲ್ಯಗಳ ಪ್ರತೀಕವಾಗಿವೆ. ಎಲ್ಲರಲ್ಲು ಹಬ್ಬವು ಸಾಮರಸ್ಯವನ್ನು ತರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಾರತೀಯ ಪರಂಪರೆಯನ್ನು ಬಿಂಬಿಸುವ ಉಡುಗೆ-ತೊಡುಗೆಗಳನ್ನು ಧರಿಸಿ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಸ್ಥೆಯ ಸಂಸ್ಥಾಪಕರುಗಳಾದ ಡಾ. ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ. ಕೆ., ವಿಮಲ್‌ ರಾಜ್‌, ಗಣಪತಿ ಕೆ. ಎಸ್‌. ಉಪನ್ಯಾಸಕ ವರ್ಗದವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಸಂಸ್ಥೆಯ ಆವರಣದಲ್ಲಿ ದೀವಟಿಗೆ ಬೆಳಕಿನಲ್ಲಿ ಬಾಣ-ಬಿರುಸು, ಪಟಾಕಿ, ನಕ್ಷತ್ರ ಕಡ್ಡಿಗಳು, ಸುಡುಮದ್ದು ಪ್ರದರ್ಶನ ನಡೆಯಿತು.





























































error: Content is protected !!
Scroll to Top