ಕಲೆ, ಸಾಹಿತ್ಯದ ಮೂಲಕ ಬಸವಣ್ಣ ಜೀವಂತವಾಗಿದ್ದಾರೆ : ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಸಮಾಜ ಸುಧಾರಕ ಬಸವಣ್ಣನವರು ಶ್ರೇಣೀಕೃತ ಜಾತಿ ವ್ಯವಸ್ಥೆಯ ಎಲ್ಲ ವರ್ಗದವರಿಗೂ ಸಮಾನ ಗೌರವ ನೀಡಿದ್ದಾರೆ. ಅವರು ಕೇವಲ ವಿವಿಧ ಜಾತಿಗಳನ್ನು ಒಗ್ಗೂಡಿಸದೆ, ಪ್ರತ್ಯೇಕ ವೈದಿಕ ಪದ್ಧತಿಗಳನ್ನು ತಿರಸ್ಕರಿಸುವ ಮೂಲಕ ಮಹಿಳೆಯರನ್ನು ಸಮಾನವಾಗಿ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾನುವಾರ ಹೇಳಿದರು. ಚಿತ್ರದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಸವಣ್ಣ ಮತ್ತು ನಾರಾಯಣ ಗುರುಗಳ ಕುರಿತು ಮಾತನಾಡಿದರು. ಕರ್ನಾಟಕ ಇಡೀ ಜಗತ್ತಿಗೆ ಸಮಾನತೆಯ ಪರಿಕಲ್ಪನೆಯನ್ನು ನೀಡಿದೆ. ಸಾಣೇಹಳ್ಳಿ ಮಠವು ನಾಟಕ, ಕಲೆ, ಸಾಹಿತ್ಯದ ಮೂಲಕ ಸಮಾಜಕ್ಕೆ ಬಸವಣ್ಣನವರ ತತ್ವಾದರ್ಶಗಳನ್ನು ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ನ್ಯಾ. ಗೋಪಾಲಗೌಡ ಉಪಸ್ಥಿತರಿದ್ದರು.













































error: Content is protected !!
Scroll to Top