Saturday, December 10, 2022
spot_img
Homeಸುದ್ದಿಡಿ.ವೈ. ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ

ಡಿ.ವೈ. ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ


ಹೊಸದಿಲ್ಲಿ : ಸುಪ್ರೀಂ ಕೋರ್ಟ್​ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ. ವೈ. ಚಂದ್ರಚೂಡ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿದ್ದ ಯು.ಯು. ಲಲಿತ್ ಅವರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಸಿಜೆಐ ಆಗಿ ಡಿ. ವೈ. ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನ. 11, 1959ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಮೇ 13, 2016ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಡಿ. ವೈ. ಚಂದ್ರಚೂಡ್ ಅವರ ತಂದೆ ಜಸ್ಟಿಸ್ ವೈ. ವಿ. ಚಂದ್ರಚೂಡ್ 1978ರ ಫೆಬ್ರವರಿ 2ರಿಂದ 1985ರ ಜುಲೈ 11ರವರೆಗೆ ಭಾರತದ 16ನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು. ಡಿ. ವೈ. ಚಂದ್ರಚೂಡ್ ಮುಂದಿನ 2 ವರ್ಷ ಅಂದರೆ 2024ರ ನವೆಂಬರ್ 10ರವರೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!