ಹೆಬ್ರಿ: ಕಾಂಗ್ರೇಸ್‌ ಕಾರ್ಯಕರ್ತರ ಸಭೆ

ಹೆಬ್ರಿ: ನಾನು ಟಿಕೆಟ್‌ ಆಕಾಂಕ್ಷಿಯಲ್ಲ ಬದಲಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಈ ತನಕ ಪಕ್ಷದ ಎಲ್ಲರನ್ನೂ ಸೇರಿಸಿಕೊಂಡು ಸೇವೆ ಮಾಡಿದ್ದೇನೆ ಎಂದು ಹೆಬ್ರಿ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದರು. ಅವರು ಹೆಬ್ರಿ ಕಾಂಗ್ರೇಸ್‌ ಬ್ಲಾಕ್ ವತಿಯಿಂದ ನ.7 ರಂದು ಚೈತನ್ಯ ಯುವ ವೃಂದದ ಸಭಾಂಗಣದಲ್ಲಿ ನಡೆದ ಕಾಂಗ್ರೇಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷಕ್ಕಾಗಿ ನಾನು ಕೊನೆಯವರೆಗೂ ದುಡಿಯುತ್ತೇನೆ. ನಮ್ಮ ಪಕ್ಷದ ನಾಯಕ ವೀರಪ್ಪ ಮೊಯ್ಲಿ ಮತ್ತು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತೇನೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೇಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡೆವೂರು, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಮಹಿಳಾ ಕಾಂಗ್ರೇಸ್‌ ಅಧ್ಯಕ್ಷೆ ರಂಜನಿ ಹೆಬ್ಬಾರ್‌, ಜಿಲ್ಲಾ ಕಾಂಗ್ರೇಸ್‌ನ ರಾಘವ ದೇವಾಡಿಗ, ಯುವ ಕಾಂಗ್ರೇಸ್‌ ಅಧ್ಯಕ್ಷ ದಿನೇಶ್‌ ಶೆಟ್ಟಿ, ಕಿಸಾನ್‌ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ಪ್ರಕಾಶ ಪೂಜಾರಿ ಉಪಸ್ಥಿತರಿದ್ದರು.

error: Content is protected !!
Scroll to Top