Thursday, December 1, 2022
spot_img
Homeಸುದ್ದಿಬಹುನಿರೀಕ್ಷಿತ ಮಳಲಿ ಮಸೀದಿ ವಿವಾದ ತೀರ್ಪು ಪ್ರಕಟ

ಬಹುನಿರೀಕ್ಷಿತ ಮಳಲಿ ಮಸೀದಿ ವಿವಾದ ತೀರ್ಪು ಪ್ರಕಟ

ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳೂರು: ಮಳಲಿ ಮಸೀದಿ ಪ್ರಕರಣ ನ್ಯಾಯಾಲಯದಲ್ಲಿತ್ತು. ಇಂದು (ನ.9) ಅರ್ಜಿಯ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಮಳಲಿ ಮಸೀದಿಯ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್​ ವ್ಯಾಪ್ತಿಯಲ್ಲಿಯೇ ನಡೆಯಲಿದೆ. ಮಸೀದಿ ಕಾಮಗಾರಿ ತಡೆಯಾಜ್ಞೆ ಕೋರಿ ಮತ್ತು ಅದರ ಸಮೀಕ್ಷೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಅರ್ಜಿ ಸಲ್ಲಿಸಿತ್ತು. ವಿಹೆಚ್​ಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಕಮೀಟಿ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯ ವಿಹೆಚ್​​ಪಿ ಅರ್ಜಿ ಸ್ವೀಕರಿಸಿ ಜನವರಿ 8, 2023ಕ್ಕೆ ಮುಂದಿನ ವಿಚಾರಣೆ ಮುಂದೂಡಿದೆ.

ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್​ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂಥ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಆಗಸ್ಟ್ 27 ರಂದೇ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಆದರೆ ಅ 17ಕ್ಕೆ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿತ್ತು. ನಂತರ ಮತ್ತೊಮ್ಮೆ ತೀರ್ಪು ಕಾಯ್ದಿರಿಸಿದ್ದು, ನ 9ಕ್ಕೆ ಕಲಾಪವನ್ನು ಮುಂದೂಡಲಾಗಿತ್ತು. ಇಂದು ತೀರ್ಪು ನೀಡಿರುವ ನ್ಯಾಯಾಲಯವು ವಿಎಚ್​ಪಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ. ಮುಂದಿನ ವಿಚಾರಣೆಯನ್ನು ಜ. 8ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here

Most Popular

error: Content is protected !!