ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮೊಹಮ್ಮದ್ ಇದ್ರಿಸ್ ಜಿ. ಡಿ. ಹಾಗೂ ಹುಝೈಫಾ ಶೇಕ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಸಂಸ್ಥೆಯ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ವಿಜ್ಞಾನ ಶಿಕ್ಷಕಿ ವಿನಯ, ಜೋಸ್ನಾ ಸ್ನೇಹಲತಾ, ಉಪನ್ಯಾಸಕ ಅಲೆನ್ ರೋಶನ್ ಡಿ’ಮೆಲ್ಲೊ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಸಹಕರಿಸಿದ್ದರು.





























































































































































































































error: Content is protected !!
Scroll to Top