Thursday, December 1, 2022
spot_img
Homeಸ್ಥಳೀಯ ಸುದ್ದಿಕಾರ್ಕಳ (ನ.14): ಅಂಬೇಡ್ಕರ್ ಭವನ ಶಿಲಾನ್ಯಾಸ

ಕಾರ್ಕಳ (ನ.14): ಅಂಬೇಡ್ಕರ್ ಭವನ ಶಿಲಾನ್ಯಾಸ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ನಗರ ಪ್ರದೇಶದ ಕಾಬೆಟ್ಟು 6 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಡಾ. ಬಿ. ಆರ್.‌ ಅಂಬೇಡ್ಕರ್ ಭವನದ ಶಿಲಾನ್ಯಾಸವು ನ.14ರಂದು ಬೆಳಿಗ್ಗೆ ಗಂಟೆ 10ಕ್ಕೆ ಜರುಗಲಿರುವುದು. ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕು ಕೇಂದ್ರದಲ್ಲಿ ರೂ. 6ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಅಂಬೇಡ್ಕರ್‌ ಭವನ ಇದಾಗಿದೆ. ಕಾರ್ಕಳದ ಕಾಬೆಟ್ಟುವಿನಲ್ಲಿ ಒಂದು ಎಕರೆ ಜಾಗವನ್ನು ಅಂಬೇಡ್ಕರ್‌ ಭವನಕ್ಕಾಗಿ ಮೀಸಲಿಡಲಾಗಿದ್ದು, ದಶಕಗಳ ಭವನದ ಕನಸು ಸಾಕರಗೊಂಡಿದೆ.

ಶಿಲಾನ್ಯಾಸವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್‌ ಕುಮಾರ್‌ ಅವರು ನೆರವೇರಿಸಲಿರುವರು. ಕಾರ್ಯಕ್ರಮದಲ್ಲಿ ಕಾರ್ಕಳದ ಪುರಸಭಾ ಅಧ್ಯಕ್ಷರು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿರುವರು.

LEAVE A REPLY

Please enter your comment!
Please enter your name here

Most Popular

error: Content is protected !!