Thursday, December 1, 2022
spot_img
Homeಸುದ್ದಿಟಿವಿಗಳಲ್ಲಿ ನಿತ್ಯ ಅರ್ಧ ತಾಸು ರಾಷ್ಟ್ರೀಯ ಹಿತಾಸಕ್ತಿ ಕಾರ್ಯಕ್ರಮ

ಟಿವಿಗಳಲ್ಲಿ ನಿತ್ಯ ಅರ್ಧ ತಾಸು ರಾಷ್ಟ್ರೀಯ ಹಿತಾಸಕ್ತಿ ಕಾರ್ಯಕ್ರಮ

ಹೊಸ ಮಾರ್ಗಸೂಚಿಯಲ್ಲಿ ಸರಕಾರ ಆದೇಶ

ಹೊಸದಿಲ್ಲಿ: ಟಿವಿ ಚಾನೆಲ್‌ಗಳು ರಾಷ್ಟ್ರೀಯ ಹಿತಾಸಕ್ತಿ ಅಥವಾ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪ್ರತಿದಿನ 30 ನಿಮಿಷ ಪ್ರಸಾರ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇತ್ತೀಚಿಗೆ ನಿಯಮ ರೂಪಿಸಿದೆ.
11 ವರ್ಷಗಳ ನಂತರ ಟಿವಿ ಚಾನೆಲ್‌ಗಳ ಅಪ್‌ ಲಿಂಕಿಂಗ್‌ ಮತ್ತು ಡೌನ್‌ಲಿಂಕ್​​ಗಾಗಿರುವ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಅನುಮೋದಿಸಿದ್ದು, ಹೊಸ ಮಾರ್ಗಸೂಚಿಯಲ್ಲಿ ರಾಷ್ಟ್ರೀಯ ಹಿತಾಸಕ್ತಿ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳ ಪ್ರಸಾರಕ್ಕಾಗಿ 30 ನಿಮಿಷಗಳ ಸಮಯವನ್ನು ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳು ಶಿಕ್ಷಣ ಮತ್ತು ಸಾಕ್ಷರತೆಯ ಪ್ರಸಾರ ಒಳಗೊಂಡಿವೆ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳೆಯರ ಮತ್ತು ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆ ಮತ್ತು ರಾಷ್ಟ್ರೀಯ ಏಕೀಕರಣದ ರಕ್ಷಣೆ ಇವೆ ಮೊದಲಾದ ವಿಷಯಗಳನ್ನು ಪ್ರಸಾರ ಮಾಡಬೇಕಿದೆ. ಸ್ಪೋರ್ಟ್ಸ್ ಚಾನೆಲ್‌ಗಳು ಮತ್ತು ಇತರ ವಾಹಿನಿಗಳು ತಮ್ಮ ವಿಷಯವನ್ನು ಸೂಕ್ತವಾಗಿ ಮಾರ್ಪಡಿಸಬಹುದು.

LEAVE A REPLY

Please enter your comment!
Please enter your name here

Most Popular

error: Content is protected !!