ನೀಟ್‌ಗೆ ಮುಂದಿನ ವರ್ಷ ಗುಡ್‌ಬೈ?

ವೈದ್ಯಕೀಯ ಪಿಜಿ ಕೋರ್ಸ್‌ಗಳ ಪ್ರವೇಶಕ್ಕೆ ಎನ್ಇಎಕ್ಸ್‌ಟಿ ಪ್ರಸ್ತಾಪ

ಹೊಸದಿಲ್ಲಿ : ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ನಿಗದಿಯಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್-ಪಿಜಿ) ಕೊನೆಯ ನೀಟ್-ಪಿಜಿ ಪರೀಕ್ಷೆಯಾಗುವ ಸಾಧ್ಯತೆ ಇದೆ.
ವೈದ್ಯಕೀಯ ಪಿಜಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಬದಲಿಗೆ ರಾಷ್ಟ್ರೀಯ ನಿರ್ಗಮನ ಪರೀಕ್ಷೆ (ಎನ್ಇಎಕ್ಸ್‌ಟಿ) ನಡೆಯಲಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಎನ್ಇಎಕ್ಸ್‌ಟಿ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಪಿಜಿ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಡಿಸೆಂಬರ್ 2023ರಲ್ಲಿ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆಸಲು ಉದ್ದೇಶಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ತಿಳಿಸಿದೆ. ಡಿಸೆಂಬರ್ 2023ರಲ್ಲಿ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆದರೆ, 2019-2020ನೇ ಬ್ಯಾಚ್‌ನ ಎಂಬಿಬಿಎಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.
ದೇಶ ಅಥವಾ ವಿದೇಶಗಳಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆಲ್ಲರಿಗೂ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ಒಂದೇ ಆಗಿರುತ್ತದೆ. ಹೀಗಾಗಿ ವಿದೇಶಗಳ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರುವವರು ಎದುರಿಸುತ್ತಿರುವ ಸಮಸ್ಯೆಗೆ ಎನ್‌ಇಎಕ್ಸ್‌ಟಿಯಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.



ಹೊಸದಿಲ್ಲಿ: ಟಿವಿ ಚಾನೆಲ್‌ಗಳು ರಾಷ್ಟ್ರೀಯ ಹಿತಾಸಕ್ತಿ ಅಥವಾ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪ್ರತಿದಿನ 30 ನಿಮಿಷ ಪ್ರಸಾರ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇತ್ತೀಚಿಗೆ ನಿಯಮ ರೂಪಿಸಿದೆ.
11 ವರ್ಷಗಳ ನಂತರ ಟಿವಿ ಚಾನೆಲ್‌ಗಳ ಅಪ್‌ ಲಿಂಕಿಂಗ್‌ ಮತ್ತು ಡೌನ್‌ಲಿಂಕ್​​ಗಾಗಿರುವ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಅನುಮೋದಿಸಿದ್ದು, ಹೊಸ ಮಾರ್ಗಸೂಚಿಯಲ್ಲಿ ರಾಷ್ಟ್ರೀಯ ಹಿತಾಸಕ್ತಿ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳ ಪ್ರಸಾರಕ್ಕಾಗಿ 30 ನಿಮಿಷಗಳ ಸಮಯವನ್ನು ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳು ಶಿಕ್ಷಣ ಮತ್ತು ಸಾಕ್ಷರತೆಯ ಪ್ರಸಾರ ಒಳಗೊಂಡಿವೆ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳೆಯರ ಮತ್ತು ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆ ಮತ್ತು ರಾಷ್ಟ್ರೀಯ ಏಕೀಕರಣದ ರಕ್ಷಣೆ ಇವೆ ಮೊದಲಾದ ವಿಷಯಗಳನ್ನು ಪ್ರಸಾರ ಮಾಡಬೇಕಿದೆ. ಸ್ಪೋರ್ಟ್ಸ್ ಚಾನೆಲ್‌ಗಳು ಮತ್ತು ಇತರ ವಾಹಿನಿಗಳು ತಮ್ಮ ವಿಷಯವನ್ನು ಸೂಕ್ತವಾಗಿ ಮಾರ್ಪಡಿಸಬಹುದು.





























































































































































































































error: Content is protected !!
Scroll to Top