Saturday, December 10, 2022
spot_img
Homeಸುದ್ದಿನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ

ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ

ಕೆಂಪೇ ಗೌಡ ಪ್ರತಿಮೆ ಅನಾವರಣ; ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ 64 ಕೋ.ರೂ. ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಪ್ರತಿಮೆಯ ಮುಂಭಾಗದಲ್ಲಿ 3 ಎಕರೆ ಜಾಗದಲ್ಲಿ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ಸಹ ತಲೆ ಎತ್ತಲಿದ್ದು, ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ ಆಡಳಿತದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವನ್ನು ಸರ್ಕಾರ ಮಾಡಿದೆ. ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಹಸಿರು ನಿಶಾನೆ, ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟನೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರದಾನಿ ಭಾಗವಹಿಸಲಿದ್ದಾರೆ. ಅನಂತರ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!