Thursday, December 1, 2022
spot_img
Homeಸುದ್ದಿಬೆಂಗಳೂರಿಗೆ ಆಗಮಿಸಿದ ಮೋದಿ: ವಾಲ್ಮೀಕಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರಿಗೆ ಆಗಮಿಸಿದ ಮೋದಿ: ವಾಲ್ಮೀಕಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ

ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ

ಬೆಂಗಳೂರು: ಬೆಂಗಳೂರಿಗೆ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರನ್ನು ರಾಜ್ಯಪಾಲ ತ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಪುಟ ಸದಸ್ಯರು ಬರಮಾಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೊದಲಾದವರಿದ್ದರು.

ಹೆಚ್ ಎಎಲ್ ಏರ್ ಪೋರ್ಟ್ ಗೆ ವಿಶೇಷ ವಿಮಾನದಲ್ಲಿ ಬಂದಿಳಿದ ಮೋದಿಯವರು ಅಲ್ಲಿಂದ ವಿಧಾನಸೌಧದ ಶಾಸಕರ ಭವನಕ್ಕೆ ತೆರಳಿ ಭವನದ ಮುಂಭಾಗದಲ್ಲಿರುವ ಕನಕದಾಸ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮೆಜೆಸ್ಟಿಕ್‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮತ್ತು ಕಾಶಿ ದರ್ಶನ ವಿಶೇಷ ರೈಲಿಗೆ ಇಂದು ಚಾಲನೆ ನೀಡಿದರು.

LEAVE A REPLY

Please enter your comment!
Please enter your name here

Most Popular

error: Content is protected !!