ಕಾರ್ಕಳ : ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ. ಬಿ. ಮಂಜುನಾಥ ಪೈ ಸ್ಮಾರಕ ಪ್ರೌಢಶಾಲೆ ದುರ್ಗ ತೆಳ್ಳಾರಿನ 10ನೇ ತರಗತಿ ವಿದ್ಯಾರ್ಥಿಗಳಾದ ಸುಜಿತ್ ಮತ್ತು ಆಕಾಶ್ ಉಡುಪಿಯ ವಳಕಾಡುವಿನ ಸಂಯುಕ್ತ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕಿ ಪ್ರಣೀಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.
ತೆಳ್ಳಾರು ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಜಿಲ್ಲೆಗೆ ತೃತೀಯ
