Saturday, December 10, 2022
spot_img
Homeಸುದ್ದಿಕನ್ನಡ ಶ್ರೇಷ್ಠ ಸಂಸ್ಕೃತಿ : ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್

ಕನ್ನಡ ಶ್ರೇಷ್ಠ ಸಂಸ್ಕೃತಿ : ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್

ಕಸಾಪ ಸಂಪದ ಕಾರ್ಯಕ್ರಮದಲ್ಲಿ ಸನ್ಮಾನ

ಕಾರ್ಕಳ: ಕನ್ನಡ ಕೇವಲ ಒಂದು ಭಾಷೆ ಮಾತ್ರವಲ್ಲ, ಶ್ರೇಷ್ಠವಾದ ಸಂಸ್ಕೃತಿ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡ ನೆಲದಲ್ಲಿ ವಾಸಿಸುವ ಎಲ್ಲರ ಮೇಲಿದೆ. ಮನೆಯ ಹಿರಿಯರು ತಮ್ಮ ಮಕ್ಕಳಿಗೆ ಇದನ್ನು ಕಲಿಸಬೇಕು ಎಂದು ನಿವೃತ್ತ ಏರ್‌ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕು ಘಟಕದ ಆಶ್ರಯದಲ್ಲಿ ನಡೆದ ಹಿರಿಯರೆಡೆಗೆ ನಮ್ಮ ನಡಿಗೆ ‘ಸಂಪದ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಸಾಪ ಹಾಗೂ ಗೀತಾನಂದ ಫೌಂಡೇಷನ್ ಮಣೂರು ಇವರ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಾಯುಸೇನೆಯಲ್ಲಿ ಸುಮಾರು ಮೂವತ್ತು ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಅವರನ್ನು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ ಪಡಿವಾಳ್, ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ‌ ನರಸಿಂಹ ಮೂರ್ತಿ, ಕಾರ್ಕಳ ಕಸಾಪ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ. ಸುಮತಿ, ಶೈಲಜಾ ಹಗ್ಡೆ, ಲಕ್ಷ್ಮೀ ಹೆಗಡೆ, ಸುಲೋಚನಾ , ರಮೇಶ್ ಕಾರ್ಣಿಕ್ ಅವರ ಪತ್ನಿ ಉಷಾ ಆರ್. ಕಾರ್ಣಿಕ್ ಉಪಸ್ಥಿತರಿದ್ದರು.
‌‌ ಕಾರ್ಕಳ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಉಪಾಧ್ಯ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರ್ ಕಾರ್ಯಕ್ರಮ ನಿರೂಪಿಸಿ ಪ್ರಭಾಕರ ಶೆಟ್ಟಿ ಕೊಂಡಳ್ಳಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!