Saturday, December 10, 2022
spot_img
HomeUncategorizedಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಬೇಕು - ನಿವೃತ್ತ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್

ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಬೇಕು – ನಿವೃತ್ತ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್

ಕಾರ್ಕಳ : ಕನ್ನಡ ಕೇವಲ ಒಂದು ಭಾಷೆಯಲ್ಲ. ಅದೊಂದು ಶ್ರೇಷ್ಠವಾದ ಸಂಸ್ಕೃತಿ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡ ನೆಲದಲ್ಲಿ ವಾಸಿಸುವ ಎಲ್ಲರ ಮೇಲಿದೆ. ಮನೆಯ ಹಿರಿಯರು ತಮ್ಮ ಮಕ್ಕಳಿಗೆ ಇದನ್ನು ಕಲಿಸಬೇಕು ಎಂದು ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಹೇಳಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಹಿರಿಯರೆಡೆಗೆ ನಮ್ಮ ನಡಿಗೆ ‘ಸಂಪದ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಸಾಪ ಹಾಗೂ ಗೀತಾನಂದ ಫೌಂಡೇಷನ್ ಮಣೂರು ಸಹಯೋಗದೊಂದಿಗೆ ದೇಶದ ವಾಯುಸೇನೆಯಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಹಾಗೂ ಹಿರಿಯರಾದ ಕಸ್ತೂರಿ ಭಾಸ್ಕರ ಕಾರಂತ ದಂಪತಿಯನ್ನು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸನ್ಮಾನಿಸಿದರು. ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ ಪಡಿವಾಳ್, ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ‌ ನರಸಿಂಹ ಮೂರ್ತಿ, ಕಾರ್ಕಳ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಸುಬ್ರಹ್ಮಣ್ಯ ಭಟ್, ಡಾ. ಸುಮತಿ, ಶೈಲಜಾ ಹೆಗ್ಡೆ, ಲಕ್ಷ್ಮೀ ಹೆಗಡೆ, ಸುಲೋಚನಾ, ರಮೇಶ್ ಕಾರ್ಣಿಕ್ ಅವರ ಪತ್ನಿ ಉಷಾ ಆರ್. ಕಾರ್ಣಿಕ್ ಉಪಸ್ಥಿತರಿದ್ದರು.
ಕಾರ್ಕಳ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಉಪಾಧ್ಯ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರ್ ಕಾರ್ಯಕ್ರಮ ನಿರೂಪಿಸಿದರು.

ಭಾಸ್ಕರ್‌ ಕಾರಂತ ದಂಪತಿಗೆ ಸನ್ಮಾನ
ಡಾ. ಶಿವರಾಮ ಕಾರಂತರ ಅಣ್ಣನ ಮಗ ನಿವೃತ್ತ ಇಂಜಿನಿಯರ್‌ ಭಾಸ್ಕರ್‌ ಕಾರಂತ ದಂಪತಿಯನ್ನು ಕಸಾಪ ವತಿಯಿಂದ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

Most Popular

error: Content is protected !!