25 ಪ್ರಖರ ಹಿಂದುತ್ವವಾದಿಗಳು ಚುನಾವಣಾ ಕಣಕ್ಕೆ

ಚಿಕ್ಕಮಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ.
ಹಿಂದೂಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸಮುದಾಯ ಮತ್ತು ಹಿಂದುತ್ವವನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಕೇಂದ್ರದಲ್ಲಿ ಮೋದಿ ಮತ್ತು ಉತ್ತರ ಪ್ರದೇಶದಲ್ಲಿ ಯೋಗಿ ಹೊರತುಪಡಿಸಿ ಹಿಂದುತ್ವವನ್ನು ರಕ್ಷಿಸಲು ಬೇರೆಯವರು ಕೆಲಸ ಮಾಡುವುದನ್ನು ಅಥವಾ ಆಡಳಿತ ನಡೆಸುವುದನ್ನು ನಾವು ನೋಡಲು ಸಾಧ್ಯವಿಲ್ಲ. ಹಿಂದೂಗಳ ಪರಿಶ್ರಮದಿಂದ ಕರ್ನಾಟಕದಲ್ಲಿ ಗೆದ್ದ ಬಿಜೆಪಿಗೆ ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.
ಇಂದಿಗೂ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿದ್ದು, ರೌಡಿಶೀಟ್‌ನಲ್ಲಿ ಹೆಸರು ಸೇರಿಸಲಾಗುತ್ತಿದೆ. ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳ ಬಗ್ಗೆ ಕರುಣೆ ತೋರಿಲ್ಲ. ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗಳೂ ನಡೆದಿವೆ ಎಂದರು.





























































































































































































































error: Content is protected !!
Scroll to Top